BREAKING News: ಕೋರ್ಟ್ ನಲ್ಲಿ ಸ್ಫೋಟ
ಪಂಜಾಬ್ ನ ಲೂಧಿಯಾನ ಕೋರ್ಟ್ ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ, ಇತರೆ ನಾಲ್ವರು ಗಾಯಗೊಂಡಿದ್ದಾರೆ.
ಲಭ್ಯ ಮಾಹಿತಿಯ ಪ್ರಕಾರ, ಕೋರ್ಟ್ ನ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿದೆ,
ಸ್ಫೋಟ ಸಂಭವಿಸಿದಾಗ ಜಿಲ್ಲಾ ನ್ಯಾಯಾಲಯವು ಕಾರ್ಯನಿರ್ವಹಿಸುತ್ತಿತ್ತು.
ಪೊಲೀಸರು ಸ್ಥಳದಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಜತೆಗೆ, ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಸ್ಫೋಟದ ನಂತರ ಕೋರ್ಟ್ ನಲ್ಲಿ ಕೆಲ ಕಾಲ ಭಯದ ವಾತಾವರಣ ಸೃಷ್ಟಿಯಾಗಿದು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾರೆ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ .