ವಿ.ಆರ್. ಕಂಬೈನ್ಸ್ ಬ್ಯಾನರ್ ಅಡಿ ‘ಮಠ’ ಚಿತ್ರವನ್ನು ಆರ್. ರಮೇಶ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಸಂತೋಷ್ ದಾವಣಗೆರೆ ನಾಯಕ ನಟನಾಗಿ ನಟಿಸಿದ್ದಾರೆ. ಉಳಿದಂತೆ ಸಾಧುಕೋಕಿಲ, ರಮೇಶ್ ಭಟ್, ತಬಲಾ ನಾಣಿ, ಶರತ್ ಲೋಹಿತಾಶ್ವ, ಬ್ಯಾಂಕ್ ಜನಾರ್ಧನ್, ರಾಜು ತಾಳಿಕೋಟೆ, ಮಂಡ್ಯ ರಮೇಶ್, ನಿರ್ದೇಶಕ ಗುರುಪ್ರಸಾದ್, ಬಿರಾದರ್ ಹಾಗೂ ಇನ್ನಿತರರು ನಟಿಸಿದ್ದಾರೆ. ‘ಮಠ’ ಚಿತ್ರಕ್ಕೆ ಜೀವನ್ ಗೌಡ ಛಾಯಾಗ್ರಾಹಣ, ಸಿ. ರವಿಚಂದ್ರನ್ ಸಂಕಲನ, ಶ್ರೀ ಗುರು ಸಂಗೀತ ನಿರ್ದೇಶನವಿದೆ. ಚಿತ್ರದ ಹಾಡುಗಳಿಗೆ ಯೋಗ ರಾಜ್ ಭಟ್, ವಿ. ನಾಗೇಂದ್ರ ಪ್ರಸಾದ್, ಗೌಸ್‌ಫೀರ್ ಸಾಹಿತ್ಯ ಬರೆದಿದ್ದಾರೆ. ಸಾಕಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಒಳಗೊಂಡಿರುವ ‘ಮಠ’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಿದೆ.