ಪತ್ನಿಯ ಕತ್ತು, ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಕೂಡ ಗಂಭೀರವಾಗಿದೆ. ಮೃತಳನ್ನು ಅರ್ಪಿತಾ ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ರಮೇಶ್ ಎಂದು ಗುರುತಿಸಲಾಗಿದೆ.