The New Indian Express
ಬೆಂಗಳೂರು: ಮೂತ್ರನಾಳದಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ತುಷಾರ್ ಗಿರಿನಾಥ್ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಿಕ್ರಮ್ (ಈಗ ಮಣಿಪಾಲ್) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಅತೀವ್ರ ದಣಿವು ಹಾಗೂ ನಿಶಕ್ತಿ ಹಿನ್ನೆಲೆಯಲ್ಲಿ ತುಷಾರ್ ಗಿರಿನಾಥ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.
ತುಷಾರ್ ಗಿರಿನಾಥ್ ಅವರಿಗೆ ಮೂತ್ರನಾಳ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಕಂಡು ಬಂದಿದೆ. ಗಿರಿನಾಥ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಂತಿಮ ವೈದ್ಯಕೀಯ ಪರೀಕ್ಷಾ ವರದಿ ಬಳಿಕ ಭಾನುವಾರ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.