ರಾಜ್ಯದಲ್ಲಿ ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರಶ್ನೆ ಮಾಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರಶ್ನೆ ಮಾಡಿದ್ದಾರೆ.
ಮಂಡ್ಯದಲ್ಲಿ ರಸ್ತೆಗುಂಡಿಗೆ ನಿವೃತ್ತ ಯೋಧ ಬಲಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸುರ್ಜೇವಾಲಾ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ರಸ್ತೆಗುಂಡಿಗೆ ರಾಜ್ಯದಲ್ಲಿ ಮತ್ತೊಂದು ಬಲಿ: ನಿವೃತ್ತ ಯೋಧನ ಮೇಲೆ ಟ್ರಕ್ ಹರಿದು ಸಾವು!
ಬಿಜೆಪಿಯ 40% ಸರ್ಕಾರ ಡಜನ್ ಗಟ್ಟಲೆ ಕನ್ನಡಿಗರನ್ಬು ಕೈಯಾರೆ ಬಲಿ ಪಡೆಯುತ್ತಿದೆ. ಮೋದಿ ಕರ್ನಾಟಕದ ಭೇಟಿಗೆ ಬೊಮ್ಮಾಯಿ ಸರ್ಕಾರ 10 ಕೋಟಿ ರೂ. ಖರ್ಚು ಮಾಡಿದೆ. ಇವಾಗ ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವಾ? ಎಂದು ಪ್ರಶ್ನಿಸಿದ್ದಾರೆ.
ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಕೆಳಗೆ ಬಿದ್ದು ಮೃತಪಟ್ಟಿದ್ದರು. 12 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ನಿವೃತ್ತಿ ಬಳಿಕ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆ ಆಗಿದ್ದರು. ನವೆಂಬರ್ 13 ರಂದು ಮಂಡ್ಯದಿಂದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿತ್ತು. <img src="https://media.kannadaprabha.com/uploads/user/imagelibrary/2022/11/15/w600X390/surjewala1.jpg" alt="ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ?: ಬಿಜೆಪಿಗೆ ರಂದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನೆ" title="ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ?: ಬಿಜೆಪಿಗೆ ರಂದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನೆ"