ಇದಕ್ಕೂ ಮುನ್ನ ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸಿದ್ದ ಕೆ.ಎಲ್ ರಾಹುಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಎದುರಿಸಿದ ಕೇವಲ 33 ಎಸೆತಗಳಲ್ಲಿ ಭರ್ಜರಿ ಮೂರು ಸಿಕ್ಸರ್ ಹಾಗೂ ಆರು ಬೌಂಡರಿಗಳೊಂದಿಗೆ 57 ರನ್ ಚಚ್ಚಿದ್ದರು. ಆ ಮೂಲಕ ಪವರ್‌ಪ್ಲೇನಲ್ಲಿ ಭಾರತ ತಂಡದ ಮೊತ್ತವನ್ನು ಏರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕೆ.ಎಲ್ ರಾಹುಲ್ ವಿಕೆಟ್ ಒಪ್ಪಿಸಿದ ಬಳಿಕ ನಾಯಕ ರೋಹಿತ್ ಶರ್ಮಾ (14 ರನ್) ಕೂಡ ವಿಕೆಟ್ ಒಪ್ಪಿಸಿದರು. 19 ರನ್ ಗಳಿಸಿ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದರೆ, ಹಾರ್ದಿಕ್ ಪಾಂಡ್ಯ ಕೇವಲ 2 ರನ್‌ಗೆ ಔಟ್ ಆದರು.
ಭಾರತ Vs ಆಸ್ಪ್ರೇಲಿಯಾ ನಡುವಣ ಅಭ್ಯಾಸ ಪಂದ್ಯದ ಸ್ಕೋರ್‌ಕಾರ್ಡ್
ಇತ್ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ರೋಹಿತ್ ಶರ್ಮಾ(ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿ.ಕೀ), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, 10 ಭುವನೇಶ್ವರ್ ಕುಮಾರ್,ಅರ್ಷದೀಪ್ ಸಿಂಗ್
ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೇವಿಡ್, ಜಾಶ್ ಇಂಗ್ಲಿಸ್ (ವಿ.ಕೀ), ಪ್ಯಾಟ್ ಕಮಿನ್ಸ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್
ಪಂದ್ಯದ ವಿವರ
ಭಾರತ ಆಸ್ಟ್ರೇಲಿಯಾ ನಡುವಣ ಅಭ್ಯಾಸ ಪಂದ್ಯ
ದಿನಾಂಕ: ಅ. 17, 2022
ಸಮಯ: ಬೆಳಗ್ಗೆ 09: 30ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ದಿ ಗಬ್ಬಾ ಸ್ಟೇಡಿಯಂ, ಬ್ರಿಸ್ಬೇನ್
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್